ಅಭಿಪ್ರಾಯ / ಸಲಹೆಗಳು

ಸ್ವಯಂ ಉದ್ಯೋಗ ನೇರ ಸಾಲ

 


ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮ

ಸ್ವಯಂ ಉದ್ಯೋಗ ನೇರ ಸಾಲ ಯೋಜನೆಯ ಮಾರ್ಗಸೂಚಿಗಳು                        ಈ ಯೋಜನೆಯಲ್ಲಿ ಆರ್ಯ ವೈಶ್ಯ ಸಮುದಾಯದವರಿಗೆ ಸೇರಿದ ಅರ್ಜಿದಾರರು ಸ್ವಯಂ ಉದ್ಯೋಗ ಕೈಗೊಳ್ಳಲು ಸಾಂಪ್ರದಾಯಿಕ ವೃತ್ತಿಗಳಲ್ಲದೆ ಇತರೆ ವೃತ್ತಿಗಳಾದ ಹಸು ಸಾಕಾಣಿಕೆ, ವ್ಯಾಪಾರ ಚಟುವಟಿಕೆಗಳು, ಸೇವಾ ಚಟುವಟಿಕೆಗಳು, ಕೈಗಾರಿಕೆ ಚಟುವಟಿಕೆಗಳು, ಇತ್ಯಾದಿ ಚಟುವಟಿಕೆಗಳನ್ನು ಕೈಗೊಳ್ಳಲು ನಿಗಮದಿಂದ ಈ ಯೋಜನೆಯಲ್ಲಿ ಗರಿಷ್ಠ ರೂ.1,00,000/-ಗಳ ಆರ್ಥಿಕ ನೆರವು ಒದಗಿಸಲು ಹಾಗೂ ಈ ಮೊತ್ತದಲ್ಲಿ ಶೇ.20ರಷ್ಟು ಗರಿಷ್ಠ ರೂ.20,000/-ಗಳ ಸಹಾಯಧನ, ಬಾಕಿ ಉಳಿಕೆ ಮೊತ್ತವಾದ ಶೇ.80 ರಷ್ಟು ಗರಿಷ್ಠ ರೂ.80,000/-ಗಳ ಸಾಲವನ್ನು ವಾರ್ಷಿಕ ಶೇ.4ರ ಬಡ್ಡಿದರದಲ್ಲಿ ಮಂಜೂರು ಮಾಡುವುದು.

                        ಈ ಯೋಜನೆಯಡಿಯಲ್ಲಿ ಘಟಕ ವೆಚ್ಚವು ಕನಿಷ್ಠ ರೂ.50,000/-ಗಳು ಹಾಗೂ ಈ ಮೊತ್ತಕ್ಕೆ ಸಹಾಯಧನವು ಕನಿಷ್ಠ ಶೇ.20ರಷ್ಟು ಅಂದರೆ ರೂ.10,000/-ಗಳು ಹಾಗೂ ಬಾಕಿ ಮೊತ್ತವಾದ ರೂ.40,000/-ಗಳಿಗೆ ಶೇ.4ರ ಬಡ್ಡಿ ದರದಲ್ಲಿ ಸಾಲ ಮಂಜೂರು ಮಾಡುವುದು.

1

ಅರ್ಹತೆ:

ಸಾಮಾನ್ಯ ವರ್ಗದಲ್ಲಿ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿದವರಾಗಿರಬೇಕು.

2

ಆದಾಯ ಮಿತಿ:

ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ. 3,00,000/-ಗಳ ಮಿತಿ ಒಳಗಿರಬೇಕು.

3

ವಯೋಮಿತಿ:

ಅರ್ಜಿದಾರರು 18 ವರ್ಷ ಮೇಲ್ಪಟ್ಟು 45 ವರ್ಷದೊಳಗಿನವರಾಗಿರಬೇಕು.

4

ವಿಳಾಸ:

ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಲು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು.

5

ಮಹಿಳೆಯರ ಮೀಸಲಾತಿ:

ಫಲಾನುಭವಿಗಳನ್ನು ಆಯ್ಕೆ ಮಾಡುವಾಗ ಶೇ.33ರಷ್ಟು ಮಹಿಳಾ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು. ಮಹಿಳೆಯರ ಮೀಸಲಾತಿ ಅಡಿಯಲ್ಲಿ ಶೇ.50ರಷ್ಟು ವಿಧವೆಯರು ಮತ್ತು ವಿಚ್ಛೇದನೆಯಾಗಿರುವ ಮಹಿಳಾ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು.

6

ವಿಶೇಷಚೇತನರು ಮೀಸಲಾತಿ(ಅಂಗವಿಕಲರ):

ಫಲಾನುಭವಿಗಳನ್ನು ಆಯ್ಕೆ ಮಾಡುವಾಗ ಶೇ.5ರಷ್ಟು ವಿಶೇಷಚೇತನ(ಅಂಗವಿಕಲ) ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

7

 

ಒಂದು ಕುಟುಂಬದಲ್ಲಿ ಒಂದು ಫಲಾನುಭವಿಯನ್ನು ಮಾತ್ರ ಆಯ್ಕೆ ಮಾಡಲಾಗುವುದು.

8

ಆಯ್ಕೆ ವಿಧಾನ:

ಈ ಯೋಜನೆಯಲ್ಲಿ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲು ಈ ಕೆಳಕಂಡಂತೆ ಜಿಲ್ಲಾ ಮಟ್ಟದ ಆಯ್ಕೆ ಸಮಿತಿ ಮೂಲಕ ಆಯ್ಕೆ ಮಾಡಲಾಗುವುದು.

9

ಸಾಲದ ಮರುಪಾವತಿ ಅವಧಿ:

ಈ ಯೋಜನೆ ಅಡಿಯಲ್ಲಿ ಪಡೆದ ಸಾಲವನ್ನು 3 ವರ್ಷಗಳ ಅವಧಿಯಲ್ಲಿ 34 ಮಾಸಿಕ ಕಂತುಗಳಲ್ಲಿ ಅಸಲು ಮತ್ತು ಬಡ್ಡಿ ಸೇರಿಸಿ ಮರುಪಾವತಿಸಬೇಕು ಹಾಗೂ ಇದರಲ್ಲಿ 2 ತಿಂಗಳು ವಿರಾಮ ಅವಧಿ ಇರುತ್ತದೆ.

10

 

ಅರ್ಜಿದಾರರು ಆಧಾರ್ ಕಾರ್ಡ್ ಹೊಂದಿರಬೇಕು, ಮೊಬೈಲ್ ಸಂಖ್ಯೆಯು ಆಧಾರ್‌ಗೆ ಜೋಡಣೆಯಾಗಿರಬೇಕು ಮತ್ತು ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಆಗಿರಬೇಕು.

ಇತ್ತೀಚಿನ ನವೀಕರಣ​ : 21-08-2023 04:08 PM ಅನುಮೋದಕರು: Adminಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080